ಬೆಂಗಳೂರು: ಯುವತಿಯರ ಅಸಭ್ಯ ಫೋಟೋ ಮತ್ತು ವಿಡಿಯೋಗಳನ್ನು ರೆಕಾರ್ಡ್ ಮಾಡಿ ಇನ್ಸ್ಟಾಗ್ರಾಮ್‌ನಲ್ಲಿ ಹಂಚುತ್ತಿದ್ದ ಪ್ರಕರಣದಲ್ಲಿ ಬನಶಂಕರಿ ಪೊಲೀಸರು ಕೆಆರ್ ಪುರಂ ನಿವಾಸಿ ಗುರುದೀಪ್ ಸಿಂಗ್ (26) ಎಂಬವನನ್ನು ಬಂಧಿಸಿದ್ದಾರೆ.
ಹೋಟೆಲ್ ಮ್ಯಾನೇಜ್ಮೆಂಟ್ ಪದವಿದಾರನಾಗಿರುವ ಗುರುದೀಪ್, ಉದ್ಯೋಗಕ್ಕಾಗಿ ಹುಡುಕಾಟದಲ್ಲಿದ್ದನು. ಯುವತಿಯೊಬ್ಬಳು ಪೊಲೀಸರನ್ನು ಟ್ಯಾಗ್ ಮಾಡಿ ದೂರು ನೀಡಿದ ಪರಿಣಾಮ, ಪೊಲೀಸರು ಸುಮೋಟೋ ಕೇಸ್ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.